Index   ವಚನ - 30    Search  
 
ಒಡೆಯನ ಹೆಸರ ಹೇಳಿ ಒಡಲ ಹೊರೆವವರು ಕೋಟ್ಯನುಕೋಟಿ. ಮೃಡನ ವೇಷವ ಧರಿಸಿ ಕಡುಗಲಿಗಳಾಗಿ ಚರಿಸುವರ ಕಣ್ಣಿನಲ್ಲಿ ಕಾಣೆ. ನುಡಿವರು, ಮಾತಿನಲ್ಲಿ ಬ್ರಹ್ಮವ ನುಡಿದಲ್ಲಿ ಫಲವೇನು? ಎನ್ನೊಡೆಯಾ, ಎನ್ನ ಬಿಡದೆ ಕಡುಗಲಿಯ ಮಾಡಯ್ಯಾ ಅಮುಗೇಶ್ವರಾ.