Index   ವಚನ - 32    Search  
 
ಕಣ್ಣಿಗೆ ಬಂದಂತೆ ಅನ್ಯದೇಶಕ್ಕೆ ಹೋಗುವ ಕುನ್ನಿಗಳಿಗೆ ಬಣ್ಣದ ಮಾತೇಕೊ? ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳುಳ್ಳವಂಗೆ ಮಹಾಜ್ಞಾನಿಗಳ ಮಾತೇಕೊ? ಕತ್ತಲೆಯ ಕಳೆದು ನಿಶ್ಚಿಂತನಾದವಂಗೆ ನಚ್ಚುಮೆಚ್ಚಿನ ರಚ್ಚೆಯ ಮಾತೇಕೊ? ಅಮುಗೇಶ್ವರಲಿಂಗವನರಿದವಂಗೆ.