Index   ವಚನ - 34    Search  
 
ಕತ್ತೆಯಂತೆ ಬತ್ತಲೆಯಿದ್ದಡೆನು, ಇಷ್ಟಲಿಂಗ ಸಂಬಂಧಿಯಾಗಬಲ್ಲನೆ? ಕಟ್ಟಿದ್ದ ಲಿಂಗವ ಕೈಯಲ್ಲಿ ಹಿಡಿದಡೇನು, ನಿತ್ಯನಾಗಬಲ್ಲನೆ? ಅನಿತ್ಯವ ಹೊತ್ತುಕೊಂಡು ತಿರುಗುವ ಅಘೋರಿಗಳ ಕಂಡಡೆ ಮಾಗಿಯ ಕೋಗಿಲೆಯಂತೆ ಮೋರೆಯ ತೋರೆನು ಅಮುಗೇಶ್ವರಾ.