Index   ವಚನ - 37    Search  
 
ಕರ್ಮೇಂದ್ರಿಯಂಗಳ ಜರಿದು ಕಡುಗಲಿಯಾದೆನು. ವರ್ಮವನತಿಗಳೆದು ನಿರ್ಮಳನಾದೆನು. ಅಣ್ಣಾ ಅಪ್ಪಾ ಎಂದು ಬಿನ್ನಾಣದ ಮಾತ ನುಡಿಯೆನು. ಅನ್ನ ಕೂಳಿಕ್ಕುವರ ಮನೆಯ ಕುನ್ನಿಗಳಾಗಿಪ್ಪವರ ನಿನಗೆ ಸರಿ ಎಂಬೆನೆ ಅಮುಗೇಶ್ವರಾ?