Index   ವಚನ - 40    Search  
 
ಕಾಗೆಯಮರಿ ಕೋಗಿಲೆಯಾಗಬಲ್ಲುದೆ? ಆಡಿನಮರಿ ಆನೆಯಾಗಬಲ್ಲುದೆ? ಸೀಳನಾಯಿ ಸಿಂಹದ ಮರಿಯಾಗಬಲ್ಲುದೆ? ಅರಿವು ಆಚಾರ ಸಮ್ಯಜ್ಞಾನವನರಿಯದೆ ನಾಮವ ಹೊತ್ತುಕೊಂಡು ತಿರುಗುವ ಗಾವಿಲರ ಮುಖವ ನೋಡಲಾಗದು ಅಮುಗೇಶ್ವರಾ.