Index   ವಚನ - 41    Search  
 
ಕಾದ ಹಾಲ ನೊಣ ಮುಟ್ಟಬಲ್ಲುದೆ? ಕಿಚ್ಚಿನೊಳಗಣ ಗುಂಡ ಬೆಕ್ಕು ಮುಟ್ಟಬಲ್ಲುದೆ? ಮರುಜವಣಿಯ ಕಡ್ಡಿ ಕಯ್ಯಲಿದ್ದವಂಗೆ ಸರ್ಪ ಕಡಿಯಬಲ್ಲುದೆ? ಈ ತ್ರಿವಿಧವನರಿದವಂಗೆ ಹಿಂದೆ ಶಂಕೆಯಿಲ್ಲ; ಮುಂದೆ ಭೀತಿಯಿಲ್ಲ. ಕಳಂಕು ಇಲ್ಲದೆ ಅಮುಗೇಶ್ವರಲಿಂಗವು ಅಪ್ಪಿಕೊಂಡಿತ್ತು.