Index   ವಚನ - 43    Search  
 
ಕಾಲಾಡಿಯಂತೆ ದೇಶದೇಶಕ್ಕೆ ತಿರುಗಲೇತಕ್ಕೆ? ಪರಸಮಯದ ಜೈನನಂತೆ ನುಡಿಯಲೇತಕ್ಕೆ? ಅರಿವುಳ್ಳವರ ಕಂಡು ಅಗಮ್ಯವ ನುಡಿಯಲೇತಕ್ಕೆ? ಲಿಂಗವನಪ್ಪಿದ ನಿಜಮಹಿಮರ ಮಾತ ಕಲಿತು ಮಂಡೆಯ ಬೋಳಿಸಿಕೊಂಡು ಈಶನ ವೇಷವ ತೊಟ್ಟು, ಗ್ರಾಸಕ್ಕೆ ತಿರುಗುವ ವೇಷಧಾರಿಗಳ ಲಿಂಗೈಕ್ಯರೆಂದಡೆ ಅಘೋರನರಕ ತಪ್ಪದು ಕಾಣಾ, ಅಮುಗೇಶ್ವರಾ.