Index   ವಚನ - 45    Search  
 
ಕಾವಿ ಕಾಷಾಂಬರವ ಹೊದ್ದು ಕಾಮವಿಕಾರಕ್ಕೆ ತಿರುಗುವ ಕರ್ಮಿಗಳ ಮುಖವ ನೋಡಲಾಗದು. ಜಂಗಮವಾಗಿ ಜಗದಿಚ್ಫೆಯ ನುಡಿವ ಜಂಗುಳಿಗಳ ಮುಖವ ನೋಡಲಾಗದು. ಲಿಂಗೈಕ್ಯರೆನಿಸಿಕೊಂಡು ಅಂಗವಿಕಾರಕ್ಕೆ ತಿರುಗುವ ಲಿಂಗದ್ರೋಹಿಗಳ ಮುಖವ ನೋಡಲಾಗದು ಕಾಣಾ, ಅಮುಗೇಶ್ವರಲಿಂಗವೆ.