ಬಸವಣ್ಣ   
Index   ವಚನ - 996    Search  
 
ಅಯ್ಯಾ, ನಿಮ್ಮ ಶರಣರ ಸಂಗಸುಖವ ಏನೆಂದುಪಮಿಸುವೆನಯ್ಯಾ, ನಿಮ್ಮ ಶರಣರ ಕೂಡೆ ಸಮಗೋಷ್ಟಿಯ- ಮಾಡುವುದನುಪಮಿಸಲಮ್ಮೆನಯ್ಯಾ. ಕೂಡಲಸಂಗಾ, ನಿಮ್ಮ ಪ್ರಮಥರೆಲ್ಲರೂ ನೆರೆದ ಗಣತಿಂಥಿಣಿಯೊಳಗೆನ್ನನೇನೆಂದರಿಯದೆ ಅಗಲದಂತಿರಿಸಯ್ಯಾ, ನಾ ನಿಮ್ಮ ಧರ್ಮದ ಕವಿಲೆ.