ಬಸವಣ್ಣ   
Index   ವಚನ - 1063    Search  
 
ಇಷ್ಟಲಿಂಗವೊಂದು ಪ್ರಾಣಲಿಂಗ (ವೊಂದು, ಭಾವಲಿಂಗ) ವೊಂದೆಂಬ ಮಿಟ್ಟಿಯ ಭಂಡರ, ಅವರ ಮಾತ ಕೇಳಲಾಗದು. ಅಂಗಳದೊಳಗೊಬ್ಬ ಗಂಡ, ಮನೆಯೊಳಗೊಬ್ಬ ಗಂಡ, ಹಿತ್ತಿಲೊಳಗೊಬ್ಬ ಗಂಡನೆಂಬ ಸತಿಯರ ಲೋಕದ ಮಾನವರು ಮೆಟ್ಟಿ ಮೂಗಕೊಯ್ಯದೆ ಮಾಣ್ಬರೆ, ಅಯ್ಯಾ ? ಲಿಂಗತ್ರಯವೆಂದು ತೋರಿದವರಾರೊ ? `ಲಿಂಗಮೇಕಂ ಪರಂ ನಾಸ್ತಿ' ಎಂದು ಸದ್ಗುರುಸ್ವಾಮಿ ಅರುಹಿದನಾಗಿ. ಷಟ್ತ್ರಿಂಶತ್ತತ್ವಕ್ಕೆ ಆಲಯಮಪ್ಪಂತಹ ಮಹಾಘನಲಿಂಗದ ಬೆಳಗು ಕರಸ್ಥಲದಲ್ಲಿ, ಮನಸ್ಥಲದಲ್ಲಿ, (ಭಾವಸ್ಥಲದಲ್ಲಿ) ವೇದ್ಯವಾದ ಬಳಿಕ ಸರ್ವಾಂಗಲಿಂಗ, ಕೂಡಲಸಂಗಯ್ಯಾ ನಿಮ್ಮ ಶರಣಂಗೆ.