Index   ವಚನ - 80    Search  
 
ಬೀಜವಿಲ್ಲದೆ ವೃಕ್ಷ ಬೆಳೆಯಬಲ್ಲುದೆ? ಹೂವಿಲ್ಲದೆ ಹಣ್ಣಾಗಬಲ್ಲುದೆ? ತೆಂಗಿನ ಮರನ ಬಿತ್ತಿದಡೆ ಅಂಬರಕ್ಕೆ ಹೋಯಿತ್ತು. ಕಾಯಿಲ್ಲದೆ, ನೀರು ಇಲ್ಲದೆ ಗಾಳಿಗೆ ಮರ ಮುರಿದಂತೆ ಆಯಿತ್ತು ಕಾಣಾ. ಅಮುಗೇಶ್ವರಲಿಂಗವನರಿಯದ ಅನಾಚಾರಿಗಳ ವಿರಕ್ತರೆಂಬೆನೆ? ಎನಲಾಗದು.