Index   ವಚನ - 81    Search  
 
ಬೆಟ್ಟದ ನೆಲ್ಲಿಯಕಾಯ ಪಟ್ಟಣಕ್ಕೆ ಹೊತ್ತುಕೊಂಡು ಹೋಗಿ ಹೊಟ್ಟೆಯ ಹೊರೆವವನಂತೆ, ಉತ್ತಮ ತೇಜಿಯ ಹೆಸರ ಕೇಳಿ ಕಡಲೆಯ ತಿಂಬ ಗಾವಲಿಗನಂತೆ, ಅತ್ತೆಯ ಹೆಸರ ಹೇಳಿ ಹೊಟ್ಟೆಯ ಹೊರೆವ ತೊತ್ತಿನಂತೆ, ಆದ್ಯರ ವಚನಂಗಳ ಅಲ್ಲಿಗಲ್ಲಿಗೆ ಉಸುರಿ ಅನ್ನ ಕೂಳಿಂಗೆ ಹರಿದಾಡುವ ಅಜ್ಞಾನಿಗಳ ಅನುಭಾವಿಗಳೆಂಬೆನೆ? ಅಯ್ಯಾ, ವಿರಕ್ತರೆಂಬೆನೆ? ವೇಷವ ಹೊತ್ತು ತಿರುಗುವ ಡೊಂಬನಂತೆ ಬಲ್ಲೆ ಬಲ್ಲೆನೆಂಬ ಅಹಂಕಾರವ ನುಡಿವ ಭವಿಗಳ ಅನುಭಾವಿಗಳೆಂಬೆನಲ್ಲದೆ ವಿರಕ್ತರೆಂಬೆನೆ? ವಿಷಯವ ಮುಂದುಗೊಂಡು ತಿರುಗುವ ಅನುಭಾವಿಗಳನೆಂತು ವಿರಕ್ತರೆಂಬೆನಯ್ಯಾ ಅಮುಗೇಶ್ವರಲಿಂಗವೆ.