ಬಸವಣ್ಣ   
Index   ವಚನ - 1227    Search  
 
ಧನಮದದಿಂದ, ಸಯದಾನಮದದಿಂದ ಮಾಡಿದೆನೆಂಬುದು ಕಡೆಮುಟ್ಟದೆ ಹೋಯಿತ್ತು. ಹಸ್ತಪರುಷದಿಂದ ಮುಟ್ಟಿ ಮಾಡಿದುದೆಲ್ಲವು ಸವೆಯಿತ್ತು. ದೃಷ್ಟಿಪರುಷದಿಂದ ನೋಡಿ ಮಾಡಿದೆನೆಂಬುದೆಲ್ಲವು ಹಚ್ಚಿತ್ತು. ವಾಕ್ಪರುಷದಿಂದ ನುಡಿದು ಮಾಡಿದುದೆಲ್ಲವು ಅಂತರಿಸಿತ್ತು. ಮನಪರುಷದಿಂದ ನೆನೆದು ಮಾಡಿದುದೆಲ್ಲವು ನಿಂದಿತ್ತು. ಭಾವಪರುಷದಿಂದ ಭಾವಿಸಿದ ಪದಾರ್ಥವೆಲ್ಲವು ನಿರ್ಭಾವದತ್ತವೇಧಿಸಲಾಯಿತ್ತು ಇಂತೀ ಪಂಚಪರುಷದಿಂದ ಮುಟ್ಟಿ ನೀಡಿದ ಪದಾರ್ಥವೆಲ್ಲವು ತೋರದ ಮುನ್ನ ಅಮಳೋಕ್ಯವಾದವು. ಕೂಡಲಸಂಗಮದೇವರ ತೃಪ್ತಿಯನರಿದಿಹೆನೆಂದು ಕೆಟ್ಟೆನು.