Index   ವಚನ - 88    Search  
 
ಮರನನೇರಿ ಹಣ್ಣನರಸಹೋದಡೆ ಮರ ಮುರಿದುಬಿದ್ದ ಮರುಳು ಮಾನವನಂತೆ, ಕೆಸರಿನೊಳಗಣ ಹುಲ್ಲ ಮೇಯಹೋದ ಪಶುವಿನಂತೆ, ಕೊಂಬೆ ಕೊಂಬೆಗೆ ಹಾರುವ ಕೋಡಗನಂತೆ, ಉಂಡ ಮನೆಯ ದೂರುವ ಒಡೆಕಾರನಂತೆ, ಹಳ್ಳ ಹಳ್ಳ ತಿಬ್ಬಳಿ ತಿರುಗುವ ಬಳ್ಳುವಿನಂತೆ, ಮಾತಿನಲ್ಲಿ ಬ್ರಹ್ಮವ ನುಡಿವ ವೇಷಧಾರಿಗಳ ಲಿಂಗಾಂಗಿಗಳೆಂದಡೆ ಮಾರಿಗೆ ತಂದ ಹಂದಿಯ ನಾಯಿ ನರಿ ತಿಂಬಂತೆ ಕಾಣಾ ಅಮುಗೇಶ್ವರಾ.