Index   ವಚನ - 90    Search  
 
ಮಾಯಾ ಯೋನಿಯಲ್ಲಿ ಹುಟ್ಟುವ ಮರುಳರೆಲ್ಲರು ಮಹಾಜ್ಞಾನಿಗಳಪ್ಪರೆ? ಕಾಮವಿಕಾರಕ್ಕೆ ತಿರುಗುವ ಜೀವಗಳ್ಳರು ಅನಾದಿ ವಸ್ತುವನರಿವರೆ? ಮಾತಿನಲ್ಲಿ ಮಹಾಜ್ಞಾನಿಗಳೆಂಬ ವೇಷಧಾರಿಗಳ ಕಂಡು ನಾಚುವೆ ಕಾಣಾ ಅಮುಗೇಶ್ವರಾ.