Index   ವಚನ - 97    Search  
 
ವಿರಕ್ತ ವಿರಕ್ತ ಎಂಬ ಹಾದಿಕಾರರ ವಿರಕ್ತರೆನ್ನಬಹುದೆ? ಕಾವಿಯ ಹೊದ್ದು ತಿರುಗುವ ಜೀವಗಳ್ಳರು ವಿರಕ್ತರೆ? ನಾಮವ ಹೊತ್ತುಕೊಂಡು ತಿರುಗುವ ಗಾವಿಲರ ವಿರಕ್ತರೆಂದಡೆ, ಅಘೋರನರಕ ತಪ್ಪದು ಅಮುಗೇಶ್ವರಲಿಂಗವೆ.