Index   ವಚನ - 99    Search  
 
ವೇದ ಶಾಸ್ತ್ರ ಆಗಮ ಪುರಾಣಗಳಲ್ಲಿ ಶ್ರುತಿ ಸ್ಮೃತಿಗಳಲ್ಲಿ ನುಡಿವುದು ಪುಸಿ. ಪುರಾತನರ ವಚನಂಗಳಲ್ಲಿ ಇಷ್ಟಲಿಂಗ ಭಿನ್ನವಾಗಲು ಮತ್ತೊಂದು ಲಿಂಗವ ಧರಿಸಿಕೊಳ್ಳಬೇಕೆಂಬುದು ಇಲ್ಲ. ಇಷ್ಟಲಿಂಗ ಸಹಸ್ರಭಿನ್ನವಾಗಲು ಧರಿಸುವುದೆಂದು ಚಿತ್ಪಿಂಡಾಗಮ ವಾತುಲಾಗಮದಲ್ಲಿ ಸಂದೇಹವಿಲ್ಲವೆಂಬವರಿಗೆ ಏಳುಕೋಟಿ ಯುಗಂಗಳಲ್ಲಿ ನಾಯಕನರಕ ತಪ್ಪದು. ಕಟ್ಟಿದವರು ಚಂದ್ರಸೂರ್ಯರು ಪೃಥ್ವಿ ಅಪ್ಪುವುಳ್ಳ ಪರಿಯಂತರವು ನಾಯಕನರಕದಲ್ಲಿಪ್ಪರು ಕಾಣಾ, ಅಮುಗೇಶ್ವರಲಿಂಗವೆ, ನಿಮ್ಮ ಶರಣರು ಲಿಂಗಭಿನ್ನವಾಗಲು ಲಿಂಗದೊಡನೆ ಅಂಗವ ಬಯಲು ಮಾಡುವರಯ್ಯಾ.