Index   ವಚನ - 101    Search  
 
ವೇಷವ ತೊಟ್ಟು ಗ್ರಾಸಕ್ಕೆ ತಿರುಗುವ ವೇಷಧಾರಿಗಳ ಕಂಡಡೆ ನಾಚಿತ್ತೆನ್ನ ಮನ. ಲಿಂಗವನರಿಯದೆ ಲಿಂಗೈಕ್ಯರೆಂಬ ಅಂಗವಿಕಾರಿಗಳ ಕಂಡಡೆ ಹೊದ್ದದು ಎನ್ನ ಮನ, ಅರಿದು ಆಚರಿಸಿದೆನೆಂಬ ಅಜ್ಞಾನಿಗಳ ಕಂಡಡೆ ಮೃಡನ ಶರಣರು ಮೆಚ್ಚುವರೆ ಅಮುಗೇಶ್ವರಾ? ಲಿಂಗವನರಿಯದಿರ್ದಡೆ ಎಂತು ಲಿಂಗೈಕ್ಯರೆಂಬೆನಯ್ಯಾ?