ಬಸವಣ್ಣ   
Index   ವಚನ - 1394    Search  
 
ಹರಿಯ ಬೇಡುವಡೆ ಅವಗೆ ಬಲೀಂದ್ರ ದಾನವನಿಕ್ಕಿದನು, ಬ್ರಹ್ಮನ ಬೇಡುವಡೆ ಅವಗೆ ಶಿರವಿಲ್ಲ, ಬೌದ್ಧನ ಬೇಡುವಡೆ ಅವಗೆ ಬುದ್ಧಿ ಸಮನಿಸದು, ಜಿನನ ಬೇಡುವಡೆ ಅವಗೆ ಉಡಲಿಲ್ಲ, ಬೆನಕನ ಬೇಡುವಡೆ ಅವಗೆ ಕೋಡು ಮುರಿಯಿತ್ತು, ಭೈರವನ ಬೇಡುವಡೆ ಅವ ಉಟ್ಟುದನಿಕ್ಕಿ ಆಡುತ್ತಿರ್ದನು. ಅಭಯಂಕರ ಜಗಕ್ಕೆಲ್ಲ! ಜಗದದಾನಿಯ ಬೇಡುವೆನು ಕೂಡಲಸಂಗಯ್ಯನ.