Index   ವಚನ - 114    Search  
 
ಹೆದರದಿರು ಮನವೆ, ಹಿಮ್ಮೆಟ್ಟದಿರು ಮನವೆ, ಹಿಡಿದ ಛಲವ ಬಿಡದಿರು ಮನವೆ. ಜರಿದರೆಂದು ಝಂಕಿಸಿದರೆಂದು ಶಸ್ತ್ರ ಸಮಾಧಿ ನೀರು ನೇಣು ವಿಷ ಔಷಧದಲ್ಲಿ ಘಟವ ಬಿಡದೆ ಗುರುವಾದಡು ಲಿಂಗವಾದಡು ಜಂಗಮವಾದಡು ನೊಸಲಲ್ಲಿ ಕಣ್ಣುಳ್ಳ ಪಶುಪತಿಯಾದಡು ತೆತ್ತಿಗರು ಕಂಡು ಒತ್ತಿ ನುಡಿದರೆಂದು ಘಟವ ಬಿಡುವ ಘಟಕರ್ಮಿಗಳು ಏಳೇಳು ಜನ್ಮದಲ್ಲಿ ಸೂಕರನ ಹೊಟ್ಟೆಯಲ್ಲಿ ಹುಟ್ಟಿ, ನೂರೊಂದು ಕುಲ ಹದಿನೆಂಟು ಜಾತಿಯ ಅಮೇಧ್ಯವ ತಿಂದು ಹೊಲೆಯರ ಮನೆಯ ಹೊಸ್ತಿಲ ಕಾಯ್ದುಕೊಂಡಿಪ್ಪರಯ್ಯಾ: ಅಮುಗೇಶ್ವರಲಿಂಗವೆ, ನಿಮ್ಮಾಣೆ ನಿಮ್ಮ ಪ್ರಮಥರಾಣೆ.