Index   ವಚನ - 13    Search  
 
ಪೂಜೆಯುಳ್ಳನ್ನಕ್ಕ ಪುಣ್ಯದ ಗೊತ್ತು ಕಾಣಬಂದಿತ್ತು. ಮಾಟವುಳ್ಳನ್ನಕ್ಕ ಮಹಾಪ್ರಮಥರ ಭಾಷೆ ಭಾಗ್ಯ ದೊರೆಕೊಂಡಿತ್ತು. ಮಾಟವಿಲ್ಲದವನ ಭಕ್ತಿ ಹಾಳೂರ ವಂಕಕ್ಕೆ ಕೋಲ ಹಿಡಿದಂತಾಯಿತ್ತು. ಮಾಡುವಲ್ಲಿ ಉಭಯವಳಿದು ಮಾಡಬಲ್ಲಡೆ, ಮಾರಯ್ಯಪ್ರಿಯ ಅಮರೇಶ್ವರಲಿಂಗವ ಕೂಡುವ ಕೂಟ.