Index   ವಚನ - 2    Search  
 
ಹೋಗುತ್ತ ಹೋಗುತ್ತ ಹೊಗೆಯ ಕಂಡೆ, ಹೊಗೆಯೊಳಗೊಂದು ನಗೆಯ ಕಂಡೆ, ನಗೆ ನಡೆಗೆಡಿಸಿ, ನಾನೆಂಬುದನರಿದು, ತಾನು ತಾನೆಯಾಗಿ ತಲ್ಲಣವಿಲ್ಲದೆ, ಎಲ್ಲವೂ ತಾನೆಂದರಿದು ತನ್ಮಯವಾಗಿ ತರಹದಲ್ಲಿ ನಿಂದು ನೋಡುತ್ತಿರಲು ಉರಿಯ ಕಂಡೆ; ಉರಿಯೊಳಗೊಂದು ಹೊಳೆವ ಜ್ಯೋತಿಯ ಕಂಡೆ; ಆ ಜ್ಯೋತಿಯೊಳಗೊಂದು ಚಿಜ್ಜ್ಯೋತಿಯ ಕಂಡೆ; ಆ ಚಿಜ್ಜ್ಯೋತಿಯೊಳಗೊಂದು ಚಿತ್ಪ್ರಕಾಶವ ಕಂಡೆ. ಆ ಚಿತ್ಪ್ರಕಾಶವೆ ತಾನೆಯಾಗಿ ಆಡುವ ಶರಣನ ಇರವೆಂತೆಂದಡೆ: ಇದ್ದೂ ಇಲ್ಲದಂತೆ, ಹೊದ್ದಿಯೂ ಹೊದ್ದದಂತೆ, ಆಡಿಯೂ ಆಡದಂತೆ, ನೋಡಿಯೂ ನೋಡದಂತೆ, ಕೂಡಿಯೂ ಕೂಡದಂತೆ, ಕುಂಭಕದೊಳು ನಿಂದು, ತುಂಬಿದಮೃತವನುಂಡು, ಆ ಬೆಂಬಳಿಯಲ್ಲಾಡುವ ಶರಣ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ ತಾನೆ ನೋಡಾ.