Index   ವಚನ - 241    Search  
 
ಉಲಿವ ಉಯ್ಯಲೆಯ ಹರಿದು ಬಂದೇರಲು, ತಾಗದೆ ತೂಗುವುದು, ಭವಸಾಗರ ಮರಳಿ ಬಾರದಂತೆ! ಹಂಸೆಯ ಮೇಲೆ ತುಂಬಿ ಕುಳ್ಳಿರ್ದು ಸ್ವರ ಗೆಯ್ಯುವ ಘೋಷವಿದೇನೊ? ಆತನಿರ್ದ ಸರ ಹರಿಯದೆ ಇದ್ದಿತ್ತು. ದೇಹಿಗಳೆಲ್ಲ ಅರಿವರೆ, ಗುಹೇಶ್ವರನ ಆಹಾರಮುಖವ?