Index   ವಚನ - 53    Search  
 
ಇಪ್ಪೆಯ ಹೂವನನುಗೊಳಿಸಲು ಇಪ್ಪೆ ಹಿಪ್ಪೆಯಾಯಿತ್ತು. ಸರ್ಪನ ಶಿರ ಕಂಠದಲ್ಲಿ ಮೂಗುತಿಯ ಸರಗೊಳಿಸಿದೆನಯ್ಯಾ. ನಾವಲ್ಲಿದ್ದಡೇನು, ನಾವಿಲ್ಲಿದ್ದಡೇನು? ನಮ್ಮ ನಮ್ಮ ಸಂಸರ್ಗದಲ್ಲಿ ನಿರುಪಮಾಕಾರಮೂರ್ತಿಗಳಾಗಿ ನಿರವಯವನೈದಿ ನಿಜಸುಖಿಗಳಾದೆವು. ಬಸವನಲ್ಲಿ ಎಮಗೆ ತೆರಪಿಲ್ಲವಯ್ಯಾ, ಅಪ್ಪಣ್ಣಾ, ಭಾವಶೂನ್ಯಳು ನಾನು ಸಂಗಯ್ಯಾ.