Index   ವಚನ - 63    Search  
 
ಎಡೆಯ ಮಾಡಿದ ಎಡೆ ಏಕವಾರಕ್ಕೆ ಮುನ್ನವೇ ತೀರಿತ್ತು. ತೀರಿದ ಪ್ರಸಾದವನುಣಹೋದರೆ ಉಂಡವರೆಲ್ಲಾ ನನ್ನ ಗಂಡರಾದರು. ಅವರ ಕಂಡು ನಾನು ಮರುಳುಗೊಂಡರೆ ಮಹದನುಭವದಲ್ಲಿ ಕೂಟವಾಯಿತ್ತಯ್ಯ ಸಂಗಯ್ಯ.