Index   ವಚನ - 93    Search  
 
ಎಲೆ ಅಯ್ಯಗಳಿರಾ, ಎಲೆಗಳೆದ ವೃಕ್ಷವ ಕಂಡಿರೆ ಬಸವನ? ಎಲೆ ಅಯ್ಯಗಳಿರಾ, ರೂಹಿಲ್ಲದ ಚೋಹವ ಕಂಡಿರೆ ಬಸವನ? ಎಲೆ ಸ್ವಾಮಿಗಳಿರಾ, ನಿಮ್ಮ ನಿಲವಿನ ದರ್ಪಣವ ಕಂಡಿರೆ ಬಸವನ? ಸಂಗಯ್ಯನಲ್ಲಿ ಸ್ವಯವಳಿದ ಬಸವನ ಕುರುಹ ಕಂಡಿರೆ?