ವಚನ - 258     
 
ನಾಭಿಮಂಡಲದ ಉದಯವೆ ಉದಯ. ಮಧ್ಯನಿರಾಳದ ನಿಲವಿನ ಪರಿಯ ನೋಡಾ! ಪವನಶೂಲದ ಮೇಲೆ ಪರಿಣಾಮವಯ್ಯಾ. ಊರ್ಧ್ವಮುಖದಲ್ಲಿ ಉದಯವಾಯಿತ್ತ ಕಂಡೆ. ಮಿಂಚುವ ತಾರಕೆ ಇದೇನೊ ಗುಹೇಶ್ವರಾ.