Index   ವಚನ - 120    Search  
 
ಏಕೆನ್ನ ಪುಟ್ಟಿಸಿದೆಯಯ್ಯಾ ಹೆಣ್ಣು ಜನ್ಮದಲ್ಲಿ ಪುಣ್ಯವಿಲ್ಲದ ಪಾಪಿಯ? ನಾನು ಇಹಪರಕ್ಕೆ ದೂರಳಯ್ಯಾ. ಎನ್ನ ನಾಮ ಹೆಣ್ಣು ನಾಮವಲ್ಲಯ್ಯಾ. ನಾನು ಸಿರಿಯಿದ್ದ ವಸ್ತುವಿನ ವಧುವಾದ ಕಾರಣ, ಸಂಗಯ್ಯನಲ್ಲಿ ಬಸವನ ವಧುವಾದ ಕಾರಣ ಎನಗೆ ಹೆಣ್ಣುನಾಮವಿಲ್ಲವಯ್ಯಾ.