Index   ವಚನ - 133    Search  
 
ಒಡಲಳಿದ ಕಾರಣ ಒಡಲಿಲ್ಲದ ಹೆಣ್ಣು ನಾನಾದೆನಯ್ಯಾ ಬಸವಾ, ಪ್ರಾಣವಿಲ್ಲದ ಪಂಚಾಕ್ಷರಿಯ ತಿಳಿಯಲು. ಆ ಪಂಚಾಕ್ಷರಿಯನರಿದು ಆನು ಬದುಕಿದೆನಯ್ಯಾ ಬಸವಾ. ಗಮನ ನಿರ್ಗಮನ ಸೂಚನೆಯಾಯಿತ್ತು. ಸಂಗಯ್ಯನಲ್ಲಿ ಹೃದಯದ ಕತ್ತಲೆಯಳಿದು ಹೃದಯ ಪ್ರಸನ್ನೆಯಾದೆನಯ್ಯಾ ಬಸವಯ್ಯಾ.