Index   ವಚನ - 180    Search  
 
ನಾನಾರ ಹೆಸರ ಕುರುಹಿಡಲಯ್ಯಾ ಬಸವಾ? ನಾನಾರ ರೂಪ ನಿಜವಿಡಲಯ್ಯಾ ಬಸವಾ? ನಾನಾರ ಮಾತ ನೆಲೆಗೊಳಿಸಲಯ್ಯಾ ಬಸವಾ? ನಾನಾರ ಮನವನಂಗೈಸಲಯ್ಯಾ ಬಸವಾ? ಎನ್ನ ಸುಖಾಕಾರಮೂರ್ತಿ ಬಸವನಡಗಿದಬಳಿಕ ಎನಗೆ ಹೆಸರಿಲ್ಲ. ರೂಪು ನಿರೂಪವಾಯಿತ್ತಯ್ಯಾ ಸಂಗಯ್ಯಾ, ಬಸವನಡಗಿದಬಳಿಕ.