Index   ವಚನ - 208    Search  
 
ಬಸವಾ ಬಸವಾ ಎಂಬ ಶಬ್ದವಡಗಿತ್ತು. ಬಸವ ಬಸವಾಯೆಂಬ ರೂಪು ನಿರೂಪಾಯಿತ್ತು. ಬಸವನ ಕಾಯವಳಿದು ನಿರಾಕುಳವಾಗಲು ಆನು ಬಸವಾ ಬಸವಾ ಬಸವ ಎಂದು ಸಂಗಯ್ಯಾ ಬಯಲಾದೆನಯ್ಯಾ.