Index   ವಚನ - 217    Search  
 
ಭಕ್ತಿಯಿಲ್ಲದ ಕಿಂಕುರ್ವಾಣವ ಮಾಡಹೋದರೆ ಆ ಭಕ್ತಿ ಗಹಗಹಿಸಿ ನಕ್ಕಿತ್ತು. ಕಿಂಕುರ್ವಾಣವಿಲ್ಲದಿದ್ದರೆ ಜ್ಞಾನವಿಲ್ಲದಾಯಿತ್ತು. ಆ ಜ್ಞಾನ ಜ್ಞಾನಕ್ಕೆ ಸುಯಿದಾನವೈದಲು ಭಕ್ತಿ ನೆಲೆಯಾಯಿತ್ತಯ್ಯ ಸಂಗಯ್ಯ.