ವಚನ - 273     
 
ಕಂಗಳ ಬೆಳಗ ಕಲ್ಪಿಸಬಾರದು, ಕರ್ಣದ ನಾದವ ವರ್ಣಿಸಬಾರದು. ಜಿಹ್ವೆಯ ರುಚಿಗೆ ಪ್ರತಿಯಿಲ್ಲವೆಂದಿತ್ತು. ಮತಿಗೆ ಮಹಾಘನವಪ್ಪ ಸುಷುಮ್ನನಾಳದ ಸುಯಿಧಾನವ, ಪ್ರಮಾಣಿಸಬಾರದು, ಅಣು ರೇಣು ತೃಣ ಕಾಷ್ಠದೊಳಗೆ ಭರಿತ ಮನೋಹರ, ನಿಂದ ನಿರಾಳ ಗುಹೇಶ್ವರ.