Index   ವಚನ - 274    Search  
 
ಸ್ಥೂಲ ಸೂಕ್ಷ್ಮದೊಳಗೆ ಬೆಳಗುವ, ಮಹಾಬೆಳಗಾಗಿ ಹೊಳೆವ, ಜ್ಞಾನಜ್ಯೋತಿ ದಳಗಳನೆಲ್ಲವ ಮೀರಿ, ನೆಳಲನುಂಗಿದ ಬಿಸಿಲೊಳಗೆ ಚಂದ್ರಮನುದಯ. ಜಲಧಿವಳಯದ ಬೆಳಸ ಹೇಳಲು ಆರ ಅಳವಲ್ಲ. ಆಳು ಆಳ್ದನ ನುಂಗಿ ಈರೇಳು ಭುವನವ ದಾಂಟಿ ಗುಹೇಶ್ವರ ನಿಂದ ನಿಲವು ಹೊರಗು ಒಳಗನೆ ನುಂಗಿತ್ತು.