Index   ವಚನ - 2    Search  
 
ಅಂಬರದಲಾಡುವ ತುಂಬಿಯ ಬಿಂಬದ ಕಂಬನಿಯೊಳಗಣ ರತ್ನದ ಬಯಕೆಯಾದ್ಯಂತವನೇನೆಂಬೆನಯ್ಯಾ? ವೇದ ಶಾಸ್ತ್ರ ಶ್ರುತಿ ಸ್ಮೃತಿಗಳು ಸ್ತುತಿಸಲರಿಯವು. ನಾದವಲ್ಲ, ಸುನಾದದ ನಿಲವಲ್ಲ ಭೇದಿಸುವಡೆ ಅಗಮ್ಯ ನೋಡಾ! ಸೊಲ್ಲಿಲ್ಲದ ಸೊಮ್ಮಿಲ್ಲದ ಘನವನೇನೆಂಬೆನು? ಎಂತು ಮರೆವೆನಯ್ಯಾ ಎನ್ನ ಅಜಗಣ್ಣ ತಂದೆಯನು?