Index   ವಚನ - 8    Search  
 
ಆರೆಂದು ಕುರುಹ ಬೆಸಗೊಳಲು, ಏನೆಂದು ಹೇಳುವೆನಯ್ಯಾ? ಕಾಯದೊಳಗೆ ಮಾಯವಿಲ್ಲ; ಭಾವದೊಳಗೆ ಭ್ರಮೆಯಿಲ್ಲ. ಕರೆದು ಬೆಸಗೊಂಬಡೆ ಕುರುಹಿಲ್ಲ. ಒಬ್ಬರಿಗೂ ಹುಟ್ಟದೆ, ಅಯೋನಿಯಲ್ಲಿ ಬಂದು ನಿರ್ಬುದ್ಧಿಯಾದವಳನೇನೆಂಬೆನಣ್ಣಾ? ತಲೆಯಳಿದು ನೆಲೆಗೆಟ್ಟು ಬೆಳಗುವ ಜ್ಯೋತಿ ಎನ್ನ ಅಜಗಣ್ಣತಂದೆಯ ಬೆನ್ನಬಳಿಯವಳಾನಯ್ಯಾ.