Index   ವಚನ - 13    Search  
 
ಕೈಯದು ಕುರುಹು, ಬಾಯದು ಬೊಬ್ಬೆ. ಉಲಿಯದಿರೊ ಭಾವಾ, ಉಲಿಯದಿರೊ ಭಾವಾ! ವಾರಿಕಲ್ಲ ಕೊಡನಲ್ಲಿ ಮುತ್ತು ಮಾಣಿಕವ ತುಂಬಿ, ಎತ್ತುವರಿಲ್ಲದೆ ಸಖಿಯನರಸುತಿಪ್ಪೆ. ಮನದ ತನುವಿನಲ್ಲಿ, ಆ ತನುವಿನ ಮನದಲ್ಲಿ ತನಗೆ ತಾನೆತ್ತಿಕೊಂಡಡೆ, ಮನ ಮೇರೆದಪ್ಪಿ ಕರಗಿ ಉಕ್ಕಿತ್ತು ನಮ್ಮ ಅಜಗಣ್ಣನಯೋಗ.