Index   ವಚನ - 19    Search  
 
ತನ್ನ ತಾನರಿದವಂಗೆ ಅರಿವೆ ಗುರು. ಅರಿವರತು ಮರಹು ನಷ್ಟವಾದಲ್ಲಿ, ದೃಷ್ಟನಷ್ಟವೆ ಗುರು. ದೃಷ್ಟನಷ್ಟವೆ ಗುರು ತಾನಾದಲ್ಲಿ, ಮುಟ್ಟಿ ತೋರಿದವರಿಲ್ಲದಡೇನು? ಸಹಜವ ನೆಲೆಗೊಳಿಸುವ ನಿರ್ಣಯ ನಿಷ್ಪತ್ತಿಯೆ ಗುರು ನೋಡಾ. ಗುರು ತಾನಾದಡೂ ಗುರುವಿಡಿದಿರಬೇಕು ಎನ್ನ ಅಜಗಣ್ಣನಂತೆ.