Index   ವಚನ - 28    Search  
 
ನುಡಿಯೆನೆಂಬಲ್ಲಿಯೆ ನುಡಿ ಅದೆ. ನಡೆಯೆನೆಂಬಲ್ಲಿಯೆ ನಡೆ ಅದೆ. ಭಾವಿಸೆನೆಂಬಲ್ಲಿಯೆ ಭಾವ ಅದೆ. ಅರಿದು ಮರೆದೆನೆಂಬಲ್ಲಿಯೆ ಅರಿವು ಮರವೆ ಅದೆ. ಅಂಗದಲ್ಲಿ ಲಿಂಗ ಲೀಯವಾಯಿತ್ತೆಂದಡೆ, ಅಲ್ಲಿಯೆ ಅಂಗ ಅದೆ. ಅನಂಗಸಂಗಿಯಾದೆನೆಂಬಲ್ಲಿಯೆ ವಿಷಯಸೂತಕ ಅದೆ. ನಾನೆ ನಾನಾದೆನೆಂಬಲ್ಲಿಯೆ ನೀನೆಂಬುದು ಅದೆ. ಅರಿದು ಮರೆದ ಪರಿ ಎಂತು ಹೇಳಾ? ಅರಿವು ನಷ್ಟವಾಗಿ, ಮರಹು ಲಯವಾಗಿಪ್ಪಡೆ ಎನ್ನ ಅಜಗಣ್ಣತಂದೆಯಲ್ಲದೆ ಮತ್ತಾರನೂ ಕಾಣೆ.