Index   ವಚನ - 34    Search  
 
ಸಿಡಿಲುಹೊಯ್ದ ಬಾವಿಗೆ ಸೋಪಾನವೇಕೊ? ನೆರೆಯರಿದ ಬಳಿಕ ಮತ್ತೆ ಮತಿ ಹುಟ್ಟಲುಂಟೆ? ಸೊಡರುಳ್ಳ ಮನೆಗೆ ಮತ್ತೆ ತಮಂಧವೆಂಬುದೇನೊ? ತನ್ನಲ್ಲಿ ತಾನು ತದ್ಗತವಾದ ಬಳಿಕ ಬೊಮ್ಮ ಪರಬೊಮ್ಮವಾದೆನೆಂಬುದಿಲ್ಲ ನೋಡಾ ಎನ್ನ ಅಜಗಣ್ಣತಂದೆಗೆ.