Index   ವಚನ - 3    Search  
 
ಅಂಗದಲ್ಲಿ ಲಿಂಗ ವೇಧಿಸಿ , ಪ್ರಾಣಕ್ಕೆ ಸಂಬಂಧವ ಮಾಡಬೇಕೆಂಬಲ್ಲಿ, ಅಂಗಕ್ಕೂ ಪ್ರಾಣಕ್ಕೂ ಲಿಂಗ ವೇಧಿಸುವುದಕ್ಕೆ ಹಾದಿಯ ಹೊಲಬು ಅದಾವ ಠಾವಿನಲ್ಲಿ ವೇಧಿಸುವುದು ಹೇಳಯ್ಯಾ? ಆ ಅಂಗ ನೀರಬಾಗಿಲ ನೆಲನೆ? ಮೆಳೆಯ ಸವರಿನ ಹಾದಿಯೆ? ಹೋಹ ಹೊಲಬಿನ ಪಥವೆ? ಈ ಅಪ್ರಮಾಣವಪ್ಪ ಲಿಂಗವ ಚಿತ್ತದ ಭೇದದಿಂದರಿತು ಆತ್ಮನ ದೃಷ್ಟದಲ್ಲಿ ಲಕ್ಷಿಸಿ, ಇದಿರಿಟ್ಟು,ಕರದ ಇಷ್ಟದಲ್ಲಿ ನಿರೀಕ್ಷಣೆಯಿಂದ ನಿಜವಸ್ತುವ ನಿಕ್ಷೇಪಿಸಿ ಬೈಚಿಟ್ಟಲ್ಲಿ ಅಂಗಕ್ಕೂ ಪ್ರಾಣಕ್ಕೂ ಬೇರೆಡೆ ಲಿಂಗವಿಪ್ಪುದೆರಡಿಲ್ಲ. ಇದು ಕ್ರಿಯಾಲೇಪಸ್ಥಲ; ಇದು ಸದ್ಭಾವ ಸಂಬಂಧ, ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕ ಮಲ್ಲಿಕಾರ್ಜುನನಲ್ಲಿ.