Index   ವಚನ - 10    Search  
 
ಇನ್ನೇವೆನಯ್ಯಾ ನಾನು ಕೆಡೆದಿದ್ದೇನೆ. ಕಾಯವುಳ್ಳನ್ನಕ್ಕ ಕರ್ಮ ಬಿಡದು ಜೀವವುಳ್ಳನ್ನಕ್ಕ ಪ್ರಕೃತಿ ಕೆಡದು, ಭಾವಿಸಿಹೆನೆಂಬನ್ನಕ್ಕ ವಿಶ್ವಾಸ ಬಿಡದು ಈ ಉಭಯವುಳ್ಳನ್ನಕ್ಕ ಮನ ನಿನ್ನ ನೆನೆಯ ಬಿಡದು. ನೀ ನಷ್ಟವಾದಲ್ಲಿ ಎನ್ನ ಭಾವ ನಷ್ಟ; ಭಾವ ನಷ್ಟವಾದಲ್ಲಿ ಎನ್ನಯ್ಯನಿಲ್ಲ; ನೀನು ಪ್ರಿಯನಲ್ಲ; ಇಮ್ಮಡಿ ದೇವನಲ್ಲ. ನಿಃಕಳಂಕಮಲ್ಲಿಕಾರ್ಜುನನೆಂಬ ಭಾವ, ಎಲ್ಲಿ ಅಡಗಿತ್ತೆಂದರಿಯೆನಲ್ಲ.