Index   ವಚನ - 11    Search  
 
ಇಷ್ಟದಲ್ಲಿ ನೋಟ, ಜ್ಞಾನದಲ್ಲಿ ಕೂಟ ಏಕಾರ್ಥವಾದಲ್ಲಿ ಕಾಯವೆಂಬ ಕದಳಿಯ ಬಿಟ್ಟುದು ಭಾವವೆಂಬ ಕುರುಹ ಮರೆದುದು. ಇಂತೀ ಉಭಯ ನಿರ್ಭಾವವಾದಲ್ಲಿ ಇಹಪರವೆಂಬ ಹೊಲಬುಗೆಟ್ಟಿತ್ತು, ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕ ಮಲ್ಲಿಕಾರ್ಜುನನು ಒಂದೆಂದಲ್ಲಿ.