Index   ವಚನ - 12    Search  
 
ಇಷ್ಟಲಿಂಗ ಪ್ರಾಣಲಿಂಗವೆಂದು ವಿಭೇದಿಸುವಲ್ಲಿ ಕುಸುಮದ ಗಿಡುವಿಂಗೆ ವಾಸನೆಯುಂಟೆ ಕುಸುಮಕಲ್ಲದೆ? ಅದು ಗಿಡುವಿಡಿದಾದ ಕುಸುಮವೆಂಬುದನರಿದು ಗಿಡುವಿನ ಹೆಚ್ಚುಗೆ; ಕುಸುಮದ ನಲವು; ಸುಗಂಧದ ಬೆಳೆ. ಭಕ್ತಿಗೆ ಕ್ರೀ, ಕ್ರೀಗೆ ಶ್ರದ್ಧೆ, ಶ್ರದ್ಧೆಗೆ ಪೂಜೆ, ಪೂಜೆಗೆ ವಿಶ್ವಾಸ, ವಿಶ್ವಾಸಕ್ಕೆ ವಸ್ತು ತನ್ಮಯವಾಗಿಪ್ಪುದು. ಇದು ತುರೀಯಭಕ್ತಿಯ ಇರವು; ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕ ಮಲ್ಲಿಕಾರ್ಜುನಲಿಂಗವ ಮೆಲ್ಲಮೆಲ್ಲನೆ ಕೂಡುವ ಕೂಟ.