Index   ವಚನ - 17    Search  
 
ಕನಕಶಿಲೆಯೆನಿಸುವ ಪಾಷಾಣದಲ್ಲಿ ರತಿ ಪುಟ್ಟಲಿಕ್ಕಾಗಿ, ಆ ಮಧ್ಯದಲ್ಲಿ ಸೂತ್ರ ತೋರಲಿಕ್ಕೆ, ಆ ಸೂತ್ರ ಆ ಪಾಷಾಣವ ಗ್ರಹಿಸಿ, ಆವ ಕಡೆ ಮುಖವಾದಲ್ಲಿ ಸೂತ್ರ ಆವರಣಿಸುವಂತೆ, ಶಿವಲಿಂಗಪೂಜೆಯಲ್ಲಿ ಲಿಂಗವ ಮುಟ್ಟುವ ಕೈ, ನಟ್ಟ ದೃಷ್ಟಿ ತನ್ನಂಗದಲ್ಲಿ ಸರ್ವಾಂಗದೋಷಂಗಳ ಮರೆದು ಜಾಗ್ರದಿರವು ಸ್ವಪ್ನದಲ್ಲಿ ತೋರುವಂತೆ ಸ್ವಪ್ನದ ಸಂಗ ಸುಷುಪ್ತಿಯನೆಯಿದಿದಂತೆ ಇಪ್ಪುದು ಶಿವಪೂಜಕನ ಶಿವಮೂರ್ತಿಧ್ಯಾನ. ಈ ಗುಣ ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕ ಮಲ್ಲಿಕಾರ್ಜುನ ಲಿಂಗವನರಿವವರಿಗಲ್ಲದೆ ಕಾಣಬಾರದು.