Index   ವಚನ - 21    Search  
 
ಕಾಣಿಗೆ ಹೋರಿ ಕಡವರವ ನೀಗಲೇತಕ್ಕೆ? ಅಲುಗಾಡಿ ತುಂಬಿದ ಕೊಡನ ಹೊಡೆಗೆಡಹಲೇತಕ್ಕೆ? ನಿನ್ನಂಗದಲ್ಲಿ ಗುರುಕೊಟ್ಟ ಲಿಂಗವೆಂಬುದೊಂದು ಕುರುಹು ಇರುತ್ತಿರಲಿಕ್ಕೆ ಆ ನಿಜಲಿಂಗದ ಸಂಗವನರಿಯದೆ ಸಂದಿಗೊಂದಿಯಲ್ಲಿ ಹೊಕ್ಕೆಹೆನೆಂಬ ಗೊಂದಣವೇತಕ್ಕೆ? ತಾ ನಿಂದಲ್ಲಿ ಕೆಡಹಿದ ಒಡವೆಯ, ಆಚೆಯಲ್ಲಿ ನೆನೆದು ಅರಸಿದಡಿಲ್ಲ. ಅದು ಮತ್ತೆ ತನಗೆ ಸಂದಿಸುವುದೆ? ಘನಲಿಂಗ ನಿನ್ನಂಗದಲ್ಲಿದ್ದಂತೆ ಕಂಡೆ ಕಾಣೆನೆಂಬ ನಿನ್ನ ನಿಜ ನಿಂದಲ್ಲಿಯೆ ಸಂದೇಹವ ತಿಳಿದುಕೊ, ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನನಲ್ಲಿ.