Index   ವಚನ - 26    Search  
 
ಕಾಲಿದ್ದಂತೆ ತಲೆ ನಡೆದುದುಂಟೆ ಅಯ್ಯಾ? ಕಣ್ಣಿದ್ದಂತೆ ಕರ್ಣ ನೋಡಿದುದುಂಟೆ ಅಯ್ಯಾ? ಬಾಯಿದ್ದಂತೆ ನಾಸಿಕ ಉಂಡುದುಂಟೆ ಅಯ್ಯಾ? ತಾಯಿಲ್ಲದೆ ಮಕ್ಕಳು ಬಂದ ತೆರನ ಹೇಳಯ್ಯಾ? ನಿಮ್ಮ ಸೇವೆಯ ತೊತ್ತಿನ ಭಾವವ ಕೇಳಲೇತಕ್ಕೆ? ಪಟದೊಳಗಣ ಬಾಲಸರಕ್ಕೆ ಪ್ರತಿಸೂತ್ರ ನೇಣುಂಟೆ? ನಿಮ್ಮಲ್ಲಿಯೆ ಎನ್ನ ಭಾವಲೇಪ, ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕ ಮಲ್ಲಿಕಾರ್ಜುನನಲ್ಲಿಯೆ.