Index   ವಚನ - 34    Search  
 
ಚಿತ್ರದ ಬೊಂಬೆಯ ಹಾಹೆ ಎಲ್ಲಕ್ಕೂ ಆತ್ಮನಿಂದ ಚೇತನಿಸಿ ನಡೆಯುತ್ತಿಹವೆ? ಅವು ಸೂತ್ರಾಧಿಕನ ಭೇದ, ಎನ್ನ ಶಕ್ತಿಜಾತಿಯ ಲಕ್ಷಣ. ನಿಮ್ಮ ಭಕ್ತಿಸೂತ್ರದಿಂದ ಎನ್ನ ಸ್ತ್ರೀಜಾತಿ ನಿಮ್ಮ ಶ್ರೀಪಾದದಲ್ಲಿ ಅಡಗಿತ್ತು. ಎನಗೆ ಭಿನ್ನದ ಮಾತಿಲ್ಲ. ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕ ಮಲ್ಲಿಕಾರ್ಜುನನೆಂಬವರು ನೀವೆ.