Index   ವಚನ - 51    Search  
 
ಬಿತ್ತಿದ ಬಿತ್ತು, ಪೃಥ್ವಿಯ ಕೂಟ, ಅಪ್ಪುವಿನ ದ್ರವದಿಂದ ಮಸ್ತಕ ಒಡೆವುದಲ್ಲದೆ, ಉಷ್ಣದ ಡಾವರಕ್ಕೆ, ಬೆಂಕಿಯ ಬೇಗೆಗೆ ಮಸ್ತಕ ಒಡೆವುದುಂಟೆ? ಲಿಂಗವು ಭಕ್ತಿಯ ಶ್ರದ್ಧೆಗೆ, ವಿಶ್ವಾಸದ ಸುಸಂಗಿಗೆ, ನಿಶ್ಚಯವಪ್ಪ ಲಿಂಗಿಗೆ ದೃಷ್ಟವಪ್ಪುದಲ್ಲದೆ, ಉನ್ಮತ್ತವಪ್ಪ ವಿಶ್ವಾಸಘಾತಕಂಗೆ, ವಂದಿಸಿ ನಿಂದಿಸುವಂಗೆ, ಹಿಂದೆ ಮುಂದೆ ಬಂದುದ ಬಾಯ್ಗಿಡುವವಂಗೆ ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕ ಮಲ್ಲಿಕಾರ್ಜುನ ಸಂಧಿಸನವಗೆ.