Index   ವಚನ - 67    Search  
 
ಸ್ವಯವಿದ್ದಂತೆ ಲಯವ ಕೂಡುವರೆ ಅಯ್ಯಾ? ಪರುಷವಿದ್ದಂತೆ ಹೇಮವನರಸುವರೆ ಅಯ್ಯಾ? ಸ್ವಯಂಜ್ಯೋತಿಯಿದ್ದಂತೆ ದೀಪವನರಸುವರೆ ಅಯ್ಯಾ? ನೀನಲ್ಲಿ ಇಲ್ಲಿ ಕೂಡಿಹೆನೆಂಬ ಕೂಟದ ಭಿನ್ನವ ಹೇಳಯ್ಯಾ? ಕಣ್ಣಿಲಿ ನೋಡಿ ಕಣ್ಣ ಮರೆದೆನೆಂದು ಆ ಭಿನ್ನಭಾವದಂತೆ ಆದಿರಲ್ಲಾ? ಅದು ನಿಮ್ಮ ಗುಣವಲ್ಲ, ಎನ್ನ ಗುಣ. ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕ ಮಲ್ಲಿಕಾರ್ಜುನಾ.